ಬೆಂಗಳೂರು : ದೇವಸ್ಥಾನಗಳ ಜೀರ್ಣೋದ್ದಾರ ಅನುದಾನಕ್ಕೆ ರಾಜ್ಯ ಸರ್ಕಾರ ತಡೆ ಹಿಡಿದಿದೆ. ಮೂರು ವಿಷಯ ಪ್ರಸ್ತಾಪಿಸಿ ದೇವಸ್ಥಾನ ಜೀರ್ಣೋದ್ಧಾರ ಅನುದಾನ ಬಿಡುಗಡೆಗೆ ತಡೆ ಹಿಡಿದು ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ.

ಈ ಬಿಜೆಪಿ ಸರ್ಕಾರ ಬಿಡುಗಡೆ ಮಾಡಿದ್ದ ಎಲ್ಲಾ ಅನುದಾನ ವನ್ನು ಈಗಿನ ಸರ್ಕಾರ ಅನುದಾನ ವನ್ನು ತಡೆ ಹಿಡಿದು ಮುಜರಾಯಿ ಇಲಾಖೆ ಆದೇಶ ಹೊರಡಿಸಿದೆ.

ದೇವಸ್ಥಾನ ಜೀರ್ಣೋದ್ದಾರ ಕಾಮಗಾರಿ ಇನ್ನೂ ಪ್ರಾರಂಭ ಆಗದಿದ್ದರೆ ಹಣ ಬಿಡುಗಡೆ ಮಾಡದಂತೆ ಧಾರ್ಮಿಕ ದತ್ತಿ ಇಲಾಖೆ ಆದೇಶದಲ್ಲಿ ಸೂಚಿಸಿದೆ.

ಇನ್ನು ಶೇ‌.50 ರಷ್ಟು ಹಣ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದರೆ ಅದನ್ನು ತಕ್ಷಣ ತಡೆ ಹಿಡಿದು ಅನುದಾನ ಬಿಡುಗಡೆ ಮಾಡದಂತೆ ಸೂಚನೆ ನೀಡಲಾಗಿದೆ. ಅನುದಾನದ ಆಡಳಿತಾತ್ಮಕ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಕೆ ಆಗಿದ್ದರೆ ಆಡಳಿತಾತ್ಮಕ ಮಂಜೂರಾತಿಯನ್ನು ತಡೆಹಿಡಿಯುವುದು. ಹೀಗೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಮೂರು ನಿರ್ದೇಶನಗಳನ್ನು ಎಲ್ಲಾ ಜಿಲ್ಲಾಧಿಕಾರಿಗಳಿಗೆ ನೀಡಿದ್ದಾರೆ. ಇದರಿಂದ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.

error: Content is protected !!