ಕೊಪ್ಪಳ : ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆಗಸ್ಟ್ 22ರಂದು ಗ್ರಾಮೀಣ ಭಾಗದಲ್ಲಿ ಸಂಚರಿಸಿ ಕೊಪ್ಪಳ ತಾಲೂಕಿನ
ಗಿಣಿಗೇರಾದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿದರು. ವಿದ್ಯಾರ್ಥಿಗಳ ವಸತಿ ಗೃಹಗಳು ಮತ್ತು ಅಡುಗೆ ಕೊಠಡಿಗೆ ತೆರಳಿ ಪರಿಶೀಲಿಸಿದರು.
ವಸತಿ ನಿಲಯದಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು. ಗಿಡಮರಗಳನ್ನು ಬೆಳೆಸಿ ಸುಂದರ ಪರಿಸರ ನಿರ್ಮಾಣ ಮಾಡಬೇಕು ಎಂದು ಸಲಹೆ ಮಾಡಿದರು.
ವಿದ್ಯಾರ್ಥಿಗಳು ಅಧ್ಯಯನಶೀಲರಾಗಬೇಕು. ನಿಲಯದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ವಿತರಣೆಗೆ ವ್ಯವಸ್ಥೆ ಮಾಡಬೇಕು.
ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ಗುರುತಿಸಿ ಓದಲು ಉತ್ತಮ ಪುಸ್ತಕಗಳ ವ್ಯವಸ್ಥೆ ಮಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಕೊಪ್ಪಳ ತಹಸೀಲ್ದಾರ ವಿಠ್ಠಲ್ ಚೌಗಲಾ,
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ವೈ ಕಾಳೆ ಸೇರಿದಂತೆ ಇನ್ನೀತರರು ಉಪಸ್ಥಿತರಿದ್ದರು.