ಗಂಗಾವತಿ. 03 ಬರಗಾಲದಿಂದ ರಾಜ್ಯದಲ್ಲಿ 42 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಸರಕಾರ ರೈತರ ಹಿತ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ ಹೇಳಿದರು.

ರವಿವಾರ ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ ನಂತರ ಮಾತನಾಡಿ, ರಾಜ್ಯದಲ್ಲಿ ಮಳೆಯಿಂದಾಗಿ ಬರಗಾಲದ ಸಮಸ್ಯೆ ಎದುರಾಗಿದ್ದು ಸರಕಾರ ರೈತರಿಗೆ ವಿದ್ಯುತ್ ಪೂರೈಸುವಲ್ಲಿ ವಿಫಲವಾಗಿದೆ, ಪಂಪಸೆಟ್ ಗಳಿಗೆ ಅನಿಯಮಿತ ಲೋಡ್ ಶೆಡ್ಡಿಂಗ್ ರೈತರು ಬೆಳೆದ ನೀರು ಹರಿಸಲು ಸಾಧ್ಯವಾಗದೆ ಬೆಳೆಗೆ ಹಾನಿಯಾಗುತ್ತಿದೆ.


ಗೃಹ ಜ್ಯೋತಿ ಯೋಜನೆಗಾಗಿ ರೈತರ 7 ಗಂಟೆಗಳ ವಿದ್ಯುತ್ ಪೂರೈಕೆ ಮಾಡುತ್ತಿರುವುದನ್ನು ತಡೆ ಹಿಡಿದಿದ್ದಾರೆ ಇದು ಖಂಡನಿಯ ಎಂದರು.
ರೈತ ವಿದ್ಯಾನಿಧಿ ಯೋಜನೆ ಹಾಗೂ ರೈತರ ಮಕ್ಕಳು ವಿದ್ಯಾವಂತರಾಗಬೇಕು ಎನ್ನುವ ಉದ್ದೇಶಕ್ಕೆ ರಾಜ್ಯದ 11 ಲಕ್ಷ ರೈತರ ಕುಟುಂಬದ ವಿಧ್ಯಾರ್ಥಿಗಳಿಗೆ ಪ್ರತಿವರ್ಷ 438.69, ಕೋಟಿ ರೂಪಾಯಿಗಳ ರೈತ ವಿದ್ಯಾನಿಧಿಯನ್ನು ನೀಡಲಾಗುತ್ತಿದ್ದು ಆದರೆ ಪ್ರಸ್ತುತ ಸರ್ಕಾರ ಯೋಜನೆಯನ್ನು ರದ್ದು ಪಡಿಸುವ ಮೂಲಕ ಬಡ ರೈತರ ಮಕ್ಕಳಿಗೆ ಅನ್ಯಾಯ ಮಾಡಿದೆ ಎಂದು ಹೇಳಿದರು.
ಜಾನುವಾರು ಸಂರಕ್ಷಿಸಲು ಪ್ರತಿ ಜಿಲ್ಲೆಗೊಂದು ಗೋ ಶಾಲೆಯನ್ನು ಸ್ಥಾಪಿಸಲು ಬಿಜೆಪಿ ಸರ್ಕಾರ ತೀರ್ಮಾನಿಸಿತ್ತು ಆದರೆ ಕಾಂಗ್ರೆಸ್ ಸರ್ಕಾರ ಈ ಯೋಜನೆಯನ್ನು ಹಿಂಪಡೆಯಲು ನಿರ್ಧರಿಸಿದೆ ಇದಯ ನ್ಯಾಯವಲ್ಲಎಂದು ಸರ್ಕಾರದ ವಿರುದ್ಧ ಕಿಡಿ ಕಾರಿದರು.

ಗಂಗಾವತಿ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಮಟ್ಕಾ ಇಸ್ಪೀಟು ಸೇರಿದಂತೆ ಅನೇಕ ಅನೈತಿಕ ಚಟುವಟಿಕೆಗಳು ನಡೆಯುತ್ತಿದ್ದು ಪೊಲೀಸ್ ಇಲಾಖೆ ಕಣ್ಮುಚ್ಚಿ ಕುಳಿತಿದೆ. ಶಾಸಕ ಗಾಲಿ‌ ಜನಾರ್ಧನರೆಡ್ಡಿ ಪೋಲಿಸ್ ಇಲಾಖೆಗೆ ಸೂಚಿಸಿದರು ಯಾಕೆ ಇದುವರೆಗೂ ನಿಯಂತ್ರಣಕ್ಕೆ ಬಂದಿಲ್ಲ ಎಂದು ಪ್ರಶ್ನಿಸಿದರು.

ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷ ಕಾಶಿನಾಥ ಚಿತ್ರಗಾರ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಲಂಕೇಶ ಗುಳದಾಳ, ವಕ್ತಾರ ಜೋಗದ ವೀರಭದ್ರಪ್ಪ ನಾಯಕ, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ವೆಂಕಟೇಶ ಅಮರಜ್ಯೋತಿ, ಮಾಜಿ ನಗರಸಭೆ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಮುಖಂಡರಾದ ಜಿ. ಶ್ರೀಧರ, ಜೋಗದ ಹನುಮಂತಪ್ಪ ನಾಯಕ, ದೇವಾನಂದ ದಾಸನಾಳ, ವೆಂಕಟೇಶ ಕೆ, ಬಸವರಾಜ ಎಚ್ ಸೇರಿದಂತೆ ಹಲವರಿದ್ದರು.

error: Content is protected !!