ಗಂಗಾವತಿ: ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಉನ್ನತ ಮಟ್ಟದ ಶಿಕ್ಷಣಕ್ಕಾಗಿ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ ಅಲ್ಪಸಂಖ್ಯಾತರ ಹಿಂದುಳಿದ ವರ್ಗದವರ ವಿದ್ಯಾರ್ಥಿಗಳಿಗಾಗಿ ಗಂಗಾವತಿ ನಗರ ಸೇರಿದಂತೆ ತಾಲೂಕಿನಾದ್ಯಂತ ವಸತಿ ನಿಲಯಗಳನ್ನು ಕಾಣಬಹುದಾಗಿದೆ.

ಆದರೆ ವಸತಿ ನಿಲಯದಲ್ಲಿನ ವಿದ್ಯಾರ್ಥಿಗಳಿಗೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಗಮನಿಸಿದ ಸಾಕಷ್ಟು ವಂಚನೆ ಪ್ರಕರಣಗಳು ಬಯಲಿಗೆ ಬಂದಿವೆ , ವಸತಿ ನಿಲಯದಲ್ಲಿರುವ ವಿದ್ಯಾರ್ಥಿಗಳಿಗೆ ಕನಿಷ್ಠ ಮೂಲಭೂತ ಸೌಲಭ್ಯ ಕಲ್ಪಿಸದೆ ಆಯಾ ಇಲಾಖೆಯ ಅಧಿಕಾರಿಗಳ ದಿವ್ಯ ನಿರ್ಲಕ್ಷತನ ಕಾಣಬಹುದಾಗಿದೆ.

ಕಳಪೆ ಮಟ್ಟದ ಆಹಾರ ಪೂರೈಕೆ, ಸ್ವಚ್ಛತೆಯ ಬಗ್ಗೆ ನಿರ್ಲಕ್ಷ್ಯ ಧೋರಣೆ, ಗಬ್ಬು ನಾರುತ್ತಿರುವ ಶೌಚಾಲಯಗಳು, ಸೇರಿದಂತೆ ವಿದ್ಯಾರ್ಥಿಗಳಿಗೆ ದಿನನಿತ್ಯ ಉಪಯೋಗಿಸುವ, ಸಾಮಗ್ರಿಗಳ ಕೊರತೆ, ಕೆಲವು ವಸತಿ ನಿಲಯಗಳಲ್ಲಿ ಕಂಡು ಬಂದಿದೆ, ರಾಜ್ಯ ಸರ್ಕಾರ ಒಬ್ಬ ಕೈದಿಗೆ ನೀಡುವ ಹಣದ ಅರ್ಧದಷ್ಟು ಮಾತ್ರ ವಿದ್ಯಾರ್ಥಿಗಳಿಗೆ ದೊರೆಯುತ್ತಿರುವುದು ದೊಡ್ಡ ದುರಂತವಾಗಿದೆ, ಈ ಹಿನ್ನೆಲೆಯಲ್ಲಿ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ವಸತಿ ನಿಲಯದ ವಾರ್ಡನ್ ಗಳು ಅಧಿಕಾರಿ ವರ್ಗದವರು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕಾದ ಅವಶ್ಯಕತೆ ಇದೆ.

ಮೂರು ತಿಂಗಳಿಗೊಮ್ಮೆ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ, ವಸತಿ ನಿಲಯದ ಸುತ್ತಮುತ್ತಲು ರೋಗ ರುಜಿನಗಳು ಹರಡದಂತೆ ಮುಂಜಾಗ್ರತೆಯ ಕ್ರಮಗಳನ್ನು ಅನುಸರಿಸಬೇಕು.ಮಲಗುವ ಸಂದರ್ಭದಲ್ಲಿ ಸೊಳ್ಳೆ ಪರದೆ, ಕಲ್ಪಿಸುವುದರ ಮೂಲಕ ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರಿಕೆ ವಹಿಸಬೇಕು.

ಇದಕ್ಕೆ ಸಂಬಂಧಿಸಿದಂತೆ ಶಾಸಕರು, ವಸತಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಒಟ್ಟಾರೆ ಬಡ ಕುಟುಂಬದಿಂದ ಬಂದಂತಹ ವಿದ್ಯಾರ್ಥಿಗಳ ಶಿಕ್ಷಣ ಹಾಗೂ ಆರೋಗ್ಯಕ್ಕೆ ಹೆಚ್ಚು ಗಮನಹರಿಸಿ ಸರಕಾರದ ವಸತಿ ನಿಲಯಗಳ ಕಾಯಕಲ್ಪಕ್ಕೆ, ಮುಂದಾಗುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕು.

error: Content is protected !!