
ಬೆಂಗಳೂರು : ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿತ್ತು. ಹೀಗೆ ಪ್ರತಿಭಟನೆ ನಡೆಸುತ್ತಿದ್ದಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬೊಮ್ಮಾಯಿ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾವೇರಿ ನೀರಿನ ವಿಚಾರವೂ ಸೇರಿ ವಿವಿಧ ರಂಗಗಳಲ್ಲಿ ರಾಜ್ಯ ಸರಕಾರದ ವೈಫಲ್ಯವನ್ನು ಖಂಡಿಸಿ ಬಿಜೆಪಿ ವತಿಯಿಂದ ನಾಳೆ ( 23-9-2023 ) ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದ ಗೌಡ, ಸಂಸದರಾದ ಪಿ.ಸಿ.ಮೋಹನ್, ರಾಜ್ಯದ ಮಾಜಿ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಬಿಜೆಪಿಯ 3 ಮಹಾನಗರ ಜಿಲ್ಲೆಗಳ ಅಧ್ಯಕ್ಷರು, ನಗರಪಾಲಿಕೆ ಮಾಜಿ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಈ ಪ್ರತಿಭಟನೆಯ ವೇಳೆ ಮಾತನಾಡಿದಂತ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರು, ಕಾವೇರಿ ನೀರಿನ ವಿಚಾರವೂ ಸೇರಿ ವಿವಿಧ ರಂಗಗಳಲ್ಲಿ ರಾಜ್ಯ ಸರಕಾರದ ವೈಫಲ್ಯವನ್ನು ಖಂಡಿಸಿ ಬಿಜೆಪಿ ವತಿಯಿಂದ ಇಂದು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ತಮಿಳುನಾಡಿಗೆ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸುವಂತೆ ಅವರು ಆಗ್ರಹಿಸಿದರು.
ತಮಿಳುನಾಡಿಗೆ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಲು ಅವರು ಒತ್ತಾಯಿಸಿದರು. ಕಾವೇರಿ ಜಲಾನಯನ ಪ್ರದೇಶದ ಜನರು ನೀರಿಗಾಗಿ ಗುಳೆ ಹೋಗುವ ಸ್ಥಿತಿ ಬರಲಿದೆ ಎಂದು ಅವರು ಎಚ್ಚರಿಸಿದರು.
ಕರ್ನಾಟಕ ಮತ್ತು ಕನ್ನಡಿಗರ ಹಿತ ಕಾಪಾಡುವಲ್ಲಿ ಕಾಂಗ್ರೆಸ್ ಸರಕಾರವು ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಪಿ.ಸಿ.ಮೋಹನ್ ಅವರು ಆಕ್ಷೇಪಿಸಿದರು.
ರಾಜ್ಯದ ಜನರನ್ನು ಬಲಿ ಕೊಡಲು ಈ ಸರಕಾರ ವಿಫಲವಾಗಿದೆ. ತಮಿಳುನಾಡಿನಲ್ಲಿ ಉತ್ತಮ ಮಳೆ ಆಗಿದ್ದರೂ, ಇಲ್ಲಿ ನೀರಿಲ್ಲದಿದ್ದರೂ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ ಎಂದು ಟೀಕಿಸಿದರು.
ಬಿಜೆಪಿ ನಾಯಕರ ಕಾವೇರಿ ಹೋರಾಟದ ಕಿಚ್ಚು ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಆ ಬಳಿಕ ಬಿಎಂಟಿಸಿ ಬಸ್ಸುಗಳಲ್ಲಿ ತುಂಬಿಕೊಂಡು ತೆರಳಿದ್ದಾರೆ.