ಗಂಗಾವತಿ ಜ 07:ಬಸವರಾಜ್ ರಾಯರಡ್ಡಿ ಇವರಿಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾನ್ನಾಗಿ ನೇಮಕ ಮಾಡಬೇಕೆಂದು ಕೊಪ್ಪಳ ಜಿಲ್ಲಾ ಸರ್ವಾoಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಇವರನ್ನು ಒತ್ತಾಯಿಸಿದ್ದಾರೆ.
ಬಸವರಾಜ ರಾಯರಡ್ಡಿಯವರನ್ನು ಆರ್ಥಿಕ ಸಲಹೆಗರರಾನ್ನಾಗಿ ನೇಮಕ ಮಾಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಮ್ಯಾಗಳ ಮನಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಇವರಿಗೆ ಕೊಪ್ಪಳ ಜಿಲ್ಲೆಯ ಜನತೆಯ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ರಾಯರಡ್ಡಿ ಇವರು ಕೊಪ್ಪಳವು ರಾಯಚೂರು ಜಿಲ್ಲೆಯಲ್ಲಿ ಇದ್ದಾಗ ಸಚಿವರಾಗಿ ಕಾರ್ಯನಿರ್ವಹಿಸಿ ಉತ್ತಮ ಕೆಲಸ ಮಾಡಿದ್ದಾರೆ.ಹಾಗೂ ಅನೇಕ ಭಾರಿ ಶಾಸಕರಾಗಿ ಅನುಭವ ಹೊಂದಿರುವ ಹಿರಿಯ ರಾಜಕಾರಣಿಯಾಗಿದ್ದಾರೆ ಮತ್ತು ಯಲಬುರ್ಗಾ ಕ್ಷೇತ್ರದಲ್ಲಿ ಶಿಕ್ಷಣ, ಅರೋಗ್ಯ, ರಸ್ತೆ, ಸಾರಿಗೆ ಇತ್ಯಾದಿ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮಾಡಿದ್ದಾರೆ.
ಕೊಪ್ಪಳ ಜಿಲ್ಲೆ ರಚನೆ ಯಾದ ಬಳಿಕ ಸ್ಥಳೀಯ ಶಾಸಕರು ಉಸ್ತುವಾರಿ ಸಚಿವರಾಗಿರುವದು ಕಡಿಮೆ. ಹೊರ ಜಿಲ್ಲೆಯವರು ಉಸ್ತುವಾರಿ ಸಚಿವರಾಗಿರುದರಿಂದ ಜಿಲ್ಲೆ ಅಭಿವೃದ್ಧಿ ಆಗಿಲ್ಲ. ಈಗ ಇರುವ ಸಚಿವರು ಮೂರು ಭಾರಿ ಉಸ್ತುವಾರಿ ಸಚಿವರಾಗಿದ್ದರು ನಿರೀಕ್ಷಿತ ಪ್ರಮಾಣದಲ್ಲಿ ಅಭಿವೃದ್ಧಿ ಆಗಿಲ್ಲ.ಅನಿವಾರ್ಯ ಕಾರಣಗಳಿಂದ ಸಚಿವ ಸ್ಥಾನದಿಂದ ವಂಚಿತ ರಾಗಿದ್ದು ಆದ್ದರಿಂದ ಈಗಲಾದರೂ ತಮ್ಮ ನೇತೃತ್ವದ ಸರ್ಕಾರದಲ್ಲಿ ಬಸವರಾಜ ರಾಯರಡ್ಡಿಯವರಿಗೆ ಸಂಪುಟ ದರ್ಜೆಯ ಸಚಿವ ಸ್ಥಾನ ನೀಡಿ ಕೊಪ್ಪಳ ಜಿಲ್ಲೆ ಅಭಿವೃದ್ಧಿ ಹೊಂದಲು ಅವಕಾಶ ಕಲ್ಪಿಸಿಕೊಡಬೇಕು. ಎಂದು ಮ್ಯಾಗಳಮನಿ ಪತ್ರಿಕಾ ಪ್ರಕಟಣೆಯ ಮೂಲಕ ಮುಖ್ಯಮಂತ್ರಿಗಳನ್ನು ಕೊಪ್ಪಳ ಜನತೆಯ ಪರವಾಗಿ ಒತ್ತಾಯಿಸಿದ್ದಾರೆ.