ಗಂಗಾವತಿ ಜ 18:ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ತೆರೆದ ಮನೆ ಎಂಬ ಕಾರ್ಯಕ್ರ ಮವನ್ನು ಹಮ್ಮಿಕೊಳ್ಳಲಾಗಿತ್ತು.
ನಂತರ ಮಾತನಾಡಿದ ಗಂಗಾವತಿ ಗ್ರಾಮೀಣ ಠಾಣೆಯ ಸಿಪಿಐ ಸೋಮಶೇಖರ್ ಜುಟ್ಟಲ್ ಜಂಗಮರ ಕಲ್ಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಶಾಲಾ ಹಂತದಲ್ಲಿ ದೇಶಭಕ್ತಿ ಮೂಡಿಸುವ ಸಲುವಾಗಿ ಈ ಒಂದು ತೆರೆದ ಮನೆ ಕಾರ್ಯಕ್ರಮದ ಉದ್ದೇಶ ಎಂದು ಮಕ್ಕಳಿಗೆ ಸಲಹೆ ಮತ್ತು ನಿಯಮ ಪಾಲನೆ ಬಗ್ಗೆ ಹೇಳಿದರು.
ಪೋಲಿಸ್ ಕರ್ತವ್ಯನಿರ್ವಹಣಾ ವಿಧಾನ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗ, ಅಪರಾಧ ವಿಭಾಗ, ತನಿಖಾಧಿಕಾರಿ ವಿಭಾಗ, ಕಂಪ್ಯೂಟರ್ ವಿಭಾಗ, ಠಾಣಾ ಬರಹಗಾರರ ವಿಭಾಗ, ಠಾಣಾ ದಿನಚರಿ, ಅರ್ಜಿಗಳ ಬಗ್ಗೆಯೂ ಮನವರಿಕೆ ಮಾಡಿಕೊಡಲಾಗುವದು. ಅಂಗ ಶೋಧನಾ ಪುಸ್ತಕ, ಕೈದಿ ಬಂಧನ ಪುಸ್ತಕ, ಸಮನ್ಸ್ ನೋಂದಣಿ, ವಾರಂಟ್ ನೋಂದಣಿ, ಎಂಒಬಿ ಪುಸ್ತಕ, ರೌಡಿ ರಿಜಿಸ್ಟರ್, ಪೂರ್ವ ಸಜಾ ಅಪರಾಧಿ ನೋಂದಣಿ, ಬಂದೂಕು ನೋಂದಣಿ, ಸಣ್ಣ ಅಪರಾಧ ಪುಸ್ತಕ, ಮೋಟಾರು ವಾಹನ ಅಪರಾಧ ಪುಸ್ತಕ ಹಾಗೂ ಅಪರಾಧಿ ದಾಖಲಾತಿ ಪುಸ್ತಕ, ಕಾನೂನು ತಿಳಿವಳಿಕೆ, ಮಕ್ಕಳ ಸುರಕ್ಷತೆ, ರಸ್ತೆ ಸಂಚಾರ ನಿಯಮ, ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣ ಸೇರಿದಂತೆ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಿರುವ ಕಾನೂನುಗಳ ಬಗ್ಗೆಯೂ ಮಕ್ಕಳಿಗೆ ಮಾಹಿತಿ ನೀಡಲಾಗುತ್ತದೆ.
ಈ ಸಂದರ್ಭದಲ್ಲಿ ಪಿಎಸ್ಐ ಅನ್ಸಾರಸಾಬ,ಎ,ಎಸ್,ಐ,ಕಲಾವತಿ,ಪೋಲಿಸ್ ಫೆದೆ ಮಂಜುನಾಥ ,ಶಿಕ್ಷಕರಾದ ಪುಟ್ಟಸ್ವಾಮಿ ಹೆಚ್,ಪಲ್ಲವಿ, ಸೇರಿದಂತೆ ಇತರರು ಇದ್ದರು