ತುಮಕೂರು: ತಾಲ್ಲೂಕಿನ ಹಿಂದುಳಿದ ವರ್ಗಗಳ (ಬಿಸಿಎಂ) ವಿದ್ಯಾರ್ಥಿ ನಿಲಯಗಳಿಗೆ ಸಿದ್ಧಗಂಗಾ ಮಠದಿಂದ ಅಕ್ಕಿ ಸಾಲ ಪಡೆದ ಪ್ರಕರಣದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಆರ್.ಗಂಗಪ್ಪ ಅವರನ್ನು ವರ್ಗಾವಣೆ ಮಾಡಲಾಗಿದೆ.

ಗಂಗಪ್ಪ ಅವರ ಜಾಗಕ್ಕೆ ಕೋಲಾರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಯು.ಸೋನಿಯಾ ವರ್ಣೇಕರ್ ಅವರನ್ನು ವರ್ಗಾವಣೆ ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬುಧವಾರ ಆದೇಶಿಸಿದೆ.

ಗಂಗಪ್ಪ ಅವರಿಗೆ ಯಾವುದೇ ಸ್ಥಳ ತೋರಿಸಿಲ್ಲ. ಇಲಾಖೆ ಕೇಂದ್ರ ಕಚೇರಿಯಲ್ಲಿ ವರದಿ ಮಾಡಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಈ ಪ್ರಕರಣದಲ್ಲಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗೀತಮ್ಮ ಅವರನ್ನು ಈಗಾಗಲೇ ಅಮಾನತು ಮಾಡಲಾಗಿದೆ.

error: Content is protected !!