ಗಂಗಾವತಿ :ಗಂಗಾವತಿ ತಾಲೂಕಿನ ಹೇರೂರು ಗ್ರಾಮದ ನಾಗರಾಜ ಟಿ. ಇವರು ದಾವಣಗೆರೆ ವಿಶ್ವವಿದ್ಯಾನಿಲಯ ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದ ಡಾ.ಸತ್ಯನಾರಾಯಣ, ಸಹ ಪ್ರಾಧ್ಯಾಪಕರು ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “ಶಿಕ್ಷಣ ಅಭಿವೃದ್ದಿಗೆ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿಯ ಅಭ್ಯಾಸಗಳು” (“Corporate Social Responsibility Practices Towards Education Development”) ಎಂಬ ಮಹಾ ಪ್ರಬಂಧಕ್ಕೆ ಪಿ.ಹೆಚ್.ಡಿ. ಪದವಿಯನ್ನು ನೀಡಲು ದಾವಣಗೆರೆ ವಿಶ್ವವಿದ್ಯಾನಿಲಯವು ಆಂಗೀಕರಿಸಿದೆ.
ಮುಂಬರುವ ಘಟಿಕೋತ್ಸವದಲ್ಲಿ ಪಿ.ಹೆಚ್.ಡಿ ಪದವಿ ಪ್ರಮಾಣಪತ್ರವನ್ನು ನೀಡಲಾಗುವುದೆಂದು ತಿಳಿಸಲಾಗಿದೆ.