ಬೆಂಗಳೂರು: ರಾಜ್ಯಸಭೆ ಚುನಾವಣೆ ಭಾರೀ ಕುತೂಹಲವನ್ನು ಮುಡಿಸಿದ್ದು, ಈಗ ಕೆ ಆರ್ ಪಿಪಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಇನ್ನಿಲ್ಲ ಬೇಡಿಕೆ ಶುರುವಾಗಿದೆ.
ಅವರಿಗೆ ಮೂರು ಪಕ್ಷದ ಮುಖಂಡರು ಸಂಪರ್ಕಿಸಿದ್ದು, ತಮ್ಮ ತಮ್ಮ ಅಭ್ಯರ್ಥಿಗಳ ಪರವಾಗಿ ಮತ ನೀಡುವಂತೆ ಕೇಳಿದ್ದಾರೆ.
ಬಿಜೆಪಿ-ಜೆಡಿಎಸ್-ಕಾಂಗ್ರೆಸ್ ನ ಘಟಾನುಘಟಿ ನಾಯಕರು ಸಂಪರ್ಕಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಅವರು ನೀಡಿರುವ ಹೇಳಿಕೆ ರಾಜಯಕೀಯ ಸಂಚಲನಕ್ಕೆ ಕಾರಣವಾಗಿದೆ.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರೂ ತಮ್ಮ ಅಭ್ಯರ್ಥಿಗಳ ಪರವಾಗಿ ಮತ ಕೇಳಿದ್ದಾರೆ. ಆದರೆ, ನಾನು ಯಾರಿಗೆ ಮತ ಹಾಕಬೇಕು ಅಂಥ ಇನ್ನೂ ನಿರ್ಧಾರ ಮಾಡಿಲ್ಲ ಎಂದಿದ್ದಾರೆ.
ಶಾಸಕ ಜನಾರ್ದನ ರೆಡ್ಡಿ ಅವರ ಮತ ಕಾಂಗ್ರೆಸ್ ಗೆ ಪಕ್ಕಾ ಎಂಬ ಸುದ್ದಿ ಹರಿದಾಡುತ್ತಿರುವಾಗ ಸ್ವತಃ ರೆಡ್ಡಿ ಅವರೇ ಯಾರಿಗೆ ಮತ ಹಾಕಬೇಕು ಎಂಬುದನ್ನು ತೀರ್ಮಾನ ಮಾಡಿಲ್ಲ ಎಂಬ ಹೇಳಿಕೆ ರಾಜಕೀಯ ಸಂಚಲನಕ್ಕೆ ಕಾರವಾಗಿದೆ.
ಇನ್ನು, ಎನ್ ಡಿಎ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಗೆಲುವಿಗೆ ಜೆಡಿಎಸ್-ಬಿಜೆಪಿ ಕಾರ್ಯತಂತ್ರ ರೂಪಿಸುತ್ತಿವೆ ಎಂದು ತಿಳಿದು ಬಂದಿದೆ. ಇದರ ಭಾಗವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಜನಾರ್ದನ ರೆಡ್ಡಿ ಮತ್ತು ಎ. ಮಂಜು ಅವರನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ.