ಕೊಪ್ಪಳ :ಜನವರಿ 05 ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2022-23ನೇ ಸಾಲಿಗೆ ಕೊಪ್ಪಳ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಜನವರಿ 07ರ ಶನಿವಾರದಂದು ಯಲಬುರ್ಗಾ ತಾಲೂಕಿನ ಬೇವೂರು ಗ್ರಾಮದ ಶ್ರೀ ಕೂಡಲಸಂಗಮೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ಏರ್ಪಡಿಸಲಾಗಿದ್ದು, ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಜರುಗಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.  

 
ಈ ಗ್ರಾಮೀಣ ಕ್ರೀಡಾಕೂಟದಲ್ಲಿ ಕಬಡ್ಡಿ, ಖೋಖೋ, ಕುಸ್ತಿ ಮತ್ತು ಎತ್ತಿನಗಾಡಿ/ ಕಂಬಳ, ಯೋಗ ಮತ್ತು ವಾಲಿಬಾಲ್ ಕ್ರೀಡೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕ್ರೀಡಾಕೂಟದಲ್ಲಿ ಕೊಪ್ಪಳ ಜಿಲ್ಲೆಯ ಎಲ್ಲಾ ತಾಲೂಕಿನ ಗ್ರಾಮೀಣ ಭಾಗದ ಪುರುಷ ಹಾಗೂ ಮಹಿಳಾ ಕ್ರೀಡಾಪಟುಗಳು ಭಾಗವಹಿಸಬಹುದಾಗಿರುತ್ತದೆ. ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಸ್ಪರ್ಧಾಳುಗಳಿಗೆ ಯಾವುದೇ ವಯೋಮಿತಿಯಿರುವುದಿಲ್ಲ ವಯೋಮಿತಿ ಮುಕ್ತ ಪಂದ್ಯಾವಳಿ ಇದಾಗಿದೆ.


ಕ್ರೀಡಾಕೂಟದಲ್ಲಿ ಭಾಗವಹಿಸುವ ಸ್ಪರ್ಧಾಳುಗಳು ಜ. 07 ರಂದು ಬೆಳಿಗ್ಗೆ 08 ಗಂಟೆಗೆ ಬೇವೂರಿನ ಶ್ರೀ ಕೂಡಲಸಂಗಮೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಗೆ ಹಾಜರಾಗಿ ತಮ್ಮ ಆಧಾರ ಕಾರ್ಡ ಝರಾಕ್ಷ ಪ್ರತಿ ಹಾಗೂ 02 ಪಾಸ್‌ಪೋರ್ಟ ಸೈಜ್ ಫೋಟೋದೊಂದಿಗೆ ಕಡ್ಡಾಯವಾಗಿ ನೋಂದಣಿ ವಿಭಾಗದಲ್ಲಿ ನೋಂದಣಿ ಮಾಡಬೇಕು. ಕ್ರೀಡಾಕೂಟದಲ್ಲಿ ಭಾಗವಹಿಸುವ ಸ್ಪರ್ಧಾಳುಗಳಿಗೆ ಯಾವುದೇ ರೀತಿಯ ಪ್ರಯಾಣ ಭತ್ಯೆ ಇರುವುದಿಲ್ಲ.


*ಸ್ಪರ್ಧೆಗಳ ವಿವರ:* ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಕಬಡ್ಡಿ, ಖೋಖೋ, ಕುಸ್ತಿ ಮತ್ತು ಎತ್ತಿನಗಾಡಿ/ಕಂಬಳ, ಯೋಗ ಮತ್ತು ವಾಲಿಬಾಲ್ ಸ್ಪರ್ಧೆಗಳು ನಡೆಯಲಿವೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ಮಳೆಮಲ್ಲೇಶ್ವರ ರಸ್ತೆ ಕೊಪ್ಪಳ ಕಚೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

error: Content is protected !!