ಗಂಗಾವತಿ :ಅಕ್ಷರ ದಾಸೋಹ ಯೋಜನೆಯ ಅಡಿಯಲ್ಲಿಬೇಸಿಗೆ ರಜಾ ಅವಧಿಯಲ್ಲಿ ಮದ್ಯಾಹ್ನದ ಬಿಸಿಯೂಟದ ಬದಲು ಶಾಲಾ ಮಕ್ಕಳಿಗೆ ಆಹಾರ ಪದಾರ್ಥಗಳನ್ನು ವಿತರಣೆ ಮಾಡುವಂತೆ ಸರ್ವಾ0ಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಕೊಪ್ಪಳ ಜಿಲ್ಲಾ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ಜಿಲ್ಲಾಧಿಕಾರಿ ಗಳಲ್ಲಿ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಬರಗಾಲ ಇರುವದರಿಂದ ಮಕ್ಕಳ ಪೌಷ್ಟಿಕ ಆಹಾರ ಮತ್ತು ಆರೋಗ್ಯ ದ್ರಷ್ಟಿಯಿಂದ ಬೇಸಿಗೆಯಲ್ಲಿ ಸರಕಾರಿ ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ನೀಡುವ ಕಾರ್ಯಕ್ರಮ ಜಾರಿಗೆ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲಿನ ತಾಪ ಹೆಚ್ಚಾಗಿರುತ್ತದೆ. ಮುಂದಿನ ದಿನಗಳಲ್ಲಿ 12 ರಿಂದ 4ಗಂಟೆಯವರೆಗೂ ಬಿಸಿಲಿನ ತಾಪ ಹೆಚ್ಚಾಗುವದು. ಈ ಸಮಯದಲ್ಲಿ ಸನ್ ಸ್ಟ್ರೋಕ್ ಆಗುವ ಸಾಧ್ಯತೆ ಇದ್ದು, ಇದರಿಂದ ತಲೆ ಸುತ್ತು, ವಾಂತಿ, ಒಮ್ಮಿ0ದೊಮ್ಮೆ ಪ್ರಜ್ಞಾಹೀನವಾಗಬಹುದು, ಎಂದು ಆರೋಗ್ಯ ಇಲಾಖೆ ಮುಂಜಾಗ್ರತೆ ಇರುವಂತೆ ಸಲಹೆ ನೀಡಿದೆ. ಹಾಗೂ ಬಹುತೇಕ ಶಾಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವದರಿಂದ ಕುಡಿಯಲು ಹಾಗೂ ಅಡುಗೆ ಸಾಮಗ್ರಿಗಳನ್ನು ತೊಳೆಯಲು ತೊಂದರೆಯಾಗುವದು. ಮತ್ತು ಲೋಕ ಸಭಾ ಚುನಾವಣೆಯ ಕಾರ್ಯಕ್ರಮಕ್ಕೆ ಶಿಕ್ಷಕರನ್ನು ನಿಯೋಜನೆ ಮಾಡುವದರಿಂದ ಬಿಸಿಯೂಟ ಮಾಡಲು ಅನಾನುಕೂಲ ಆಗುತ್ತದೆ. ಈ ಎಲ್ಲಾ ಅಂಶಗಳನ್ನು ಗಮನಿಸಿ ಮಕ್ಕಳ ಆರೋಗ್ಯ ಹಿತ ದ್ರಷ್ಟಿಯಿಂದ, ಶಾಲಾ ಮಕ್ಕಳಿಗೆ ಆಹಾರ ಪದಾರ್ಥ ವಿತರಣೆ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮ್ಯಾಗಳಮನಿ ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.