ರಾಯಚೂರು: ತಾಲೂಕಿನ ಬಿಚ್ಚಾಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಬಿ.ಯದ್ಲಾಪುರು ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ರಸ್ತೆ ಕೊಚ್ಚಿಹೋಗಿ ಸಂಪರ್ಕ ಕಡಿತಗೊಂಡು ದುರಸ್ತಿಯಾಗದೇ ದಿನ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ದಿನ ನಿತ್ಯ ಓಡಾಟಕ್ಕೆ ಪರದಾಡುವಂತ ಸ್ಥಿತಿ ನಿರ್ಮಾಣವಾಗಿದ್ದು, ಸಂಬಂಧಪಟ್ಟಂತಹ ಅಧಿಕಾರಿಗಳು ಹಾಗೂ ರಾಜಕಾರಣಿಗಳ ವಿರುದ್ದ ಸ್ಥಳೀಯ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ರಾಯಚೂರು ತಾಲೂಕಿನ ಗಿಲ್ಲೇಸೂಗು ಹೋಬಳಿಯ ಬಿಚ್ಚಾಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿ.ಯದ್ಲಾಪುರು ಗ್ರಾಮದಲ್ಲಿ ಈ ಪರಿಸ್ಥಿತಿ ನಿರ್ಮಾಣವಾಗಿದ್ದು, ರಸ್ತೆ ಕಡಿತವಾಗಿದ್ದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತುಂಬಾ ತೊಂದರೆ ಅನುಭವಿಸುತ್ತಿದು ಪ್ರತಿದಿನ ಪ್ರಯಾಣಕ್ಕೆ ಸ್ಥಳೀಯ ನಾಗರಿಕರಿಗೆ ತೊಂದರೆಯಾಗುವುದರಿಂದ ಈ ಬಗ್ಗೆ ಯಾವುದೇ ಅಧಿಕಾರಿಗಗಳು, ರಾಜಕಾರಣಿಗಳು ಗಮನಹರಿಸದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.