ಕೋಪ್ಪಳ: ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ, ಮಗು ಸಾವನ್ನಪ್ಪಿದ್ದಾರೆಂದು ಆರೋಪಿಸಿ ಕುಟುಂಬಸ್ಥರು ಆಕ್ರೋಶ ಹೊರಹಾಕಿದ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳದ ತಾಯಿ, ಮಕ್ಕಳ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ಪ್ರತಿಭಾ ಹಿರೇಮಠ (25) ಸಾವನ್ನಪ್ಪಿದ ಮಹಿಳೆ.

ಖಾಸಗಿ ಆಸ್ಪತ್ರೆ ವೈದ್ಯ ಡಾ ಮಹೇಶ ಮೇಲೆ ನಿರ್ಲಕ್ಷ್ಯದ ಆರೋಪ ಮಾಡಲಾಗಿದೆ.

ಗಜೇಂದ್ರಗಡ ತಾಲೂಕಿನ ಸೂಡಿ ಗ್ರಾಮದ ಪ್ರತಿಭಾ ಹಿರೇಮಠ ಮಂಗಳವಾರ ಕೊಪ್ಪಳ ಗೋವನಕೊಪ್ಪ ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಿಪಿ ಹೆಚ್ಚಾದ ಹಿನ್ನಲೆಯಲ್ಲಿ ವೈದ್ಯರು ರಾತ್ರಿ ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ.

ಜಿಲ್ಲಾಸ್ಪತ್ರೆಗೆ ಬರುವ ವೇಳೆಯಲ್ಲಿಯೇ ಹೊಟ್ಟೆಯಲ್ಲಿಯೇ ಶಿಶು ಸಾವನ್ನಪ್ಪಿತ್ತು. ಅದಾದ ಬಳಿಕ ಜಿಲ್ಲಾಸ್ಪತ್ರೆಯಲ್ಲಿ ಇಂದು ಪ್ರತಿಭಾ ಮೃತಪಟ್ಟಿದ್ದಾರೆ. ಡಾ. ಮಹೇಶ ವಿರುದ್ಧ ಪ್ರತಿಭಾ ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ.

error: Content is protected !!