ಗಂಗಾವತಿ.26:ಮಾದಕ ವಸ್ತುಗಳ ಸೇವನೆಗೊಮ್ಮೆ ಒಳಗಾದರೆ, ಅದರಿಂದ ಹೊರಬರುವುದು ಕಷ್ಟ. ಇದು ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ಸಿಪಿಐ ಸೋಮಶೇಖರ್ ಜುಟ್ಟಲ್ ಹೇಳಿದ್ದಾರೆ.
ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ಹಾಗೂ ಗಂಗಾವತಿ ನಗರದ ಶ್ರೀ ಕೊಲ್ಲಿ ನಾಗೇಶ್ವರರಾವ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ಸಪ್ತಾಹ ಅಂಗವಾಗಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮದ್ಯಪಾನ,ಧೂಮಪಾನದಂತಹ ದುಶ್ಚ್ಚಟಗಳಿಗೆ ಹದಿಹರೆಯದ ವಯಸ್ಸಿನವರು ಒಳಗಾಗುತ್ತಾರೆ. ಒಮ್ಮೆ ಮಾದಕ ವಸ್ತುಗಳ ಸೇವನೆಗೆ ಒಳಗಾದರೆ ಅದರಿಂದ ಹೊರಬರುವುದು ತುಂಬಾ ಕಷ್ಟ ಎಂಬುದನ್ನು ತಿಳಿಹೇಳಬೇಕಿದೆ ಎಂದರು.
1980ರಲ್ಲಿ 28-30 ವರ್ಷ ವಯೋಮಾನದ ಬಳಿಕ ಮದ್ಯಪಾನ, ಧೂಮಪಾನಕ್ಕೆ ಒಳಗಾಗುತ್ತಿದ್ದರು. ಆದರೆ, ಇತ್ತೀಚೆಗೆ 17-18 ವರ್ಷ ವಯೋಮಾನದವರು ವ್ಯಸನಕ್ಕೆ ತುತ್ತಾಗುತ್ತಿದ್ದಾರೆ. ಇವರು ಸಾಮಾನ್ಯ ವ್ಯಕ್ತಿಗಿಂತ 3 ಪಟ್ಟು ಹೆಚ್ಚು ಕಾಯಿಲೆಗಳಿಗೆ ಒಳಗಾಗುತ್ತಾರೆ. ಸಾವು ಬೇಗ ಸಂಭವಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ಪಿಎಸ್ಐ ಎಂ.ಅನ್ಸಾರಸಾಬ,ಪ್ರಾಂಶುಪಾಲರಾದ ಜಗದೇವಿ ಕಲಶೆಟ್ಟಿ,ಡಾ.ಸೋಮಶೇರ್, ಎ.ಎಸ್.ಐ,ಮಂಜುನಾಥ ಹುಲ್ಲೂರು ,ಡಾ.ರವಿಕಿರಣ,ಪ್ರೊ,ಕರಿಗೂಳಿ, ಪೊಲೀಸ್ ಸಿಬ್ಬಂದಿಗಳಾದ ಬಸವರಾಜ ಚಿನ್ನೂರು,ಮಾಸಪ್ಪ,
ವಿಧ್ಯಾರ್ಥಿ ವಿಧ್ಯಾರ್ಥಿಗಳು ಸೇರಿದಂತೆ ಇತರರು