*ಗೌರಿ-ಗಣೇಶ ಹಬ್ಬದ ನಿಮಿತ್ತವಾಗಿ ಕಾನೂನು & ಸುವ್ಯವಸ್ಥೆ ಕಾಪಾಡಲು ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ||ನಲಿನ್ ಅತುಲ್*
ಕೊಪ್ಪಳ:ಗೌರಿ-ಗಣೇಶ ಹಬ್ಬದ ನಿಮಿತ್ತವಾಗಿ ಕಾನೂನು & ಸುವ್ಯವಸ್ಥೆ ಕಾಪಾಡಲು ಜಿಲ್ಲೆ ಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು, ಕೊಪ್ಪಳ ಇವರ ಆದೇಶದಂತೆ
ಜಿಲ್ಲಾ ಪೊಲೀಸ್ ಅಧೀಕ್ಷಕರು, ಕೊಪ್ಪಳ ರವರು ದಿನಾಂಕ: 07-09-2024 ರಿಂದ ಆಚರಿಸಲ್ಪಡುವ ಗೌರಿ ಗಣೇಶ ಹಬ್ಬದ ಪ್ರಯುಕ್ತ ವಿವಿಧ ಮಂಡಳಿಯವರು ವಿಜೃಂಭಣೆಯಿಂದ ಗಣೇಶ ಮೂರ್ತಿಗಳನ್ನು ಮೆರವಣಿಗೆಯಲ್ಲಿ ತೆಗೆದುಕೊಂಡು ಬಂದು ಪ್ರತಿಷ್ಠಾಪನೆ ಮಾಡಿ ಪೂಜಾ ಕಾರ್ಯಕ್ರಮಗಳನ್ನು ಕೈಗೊಳ್ಳುವರು
ನಂತರ ಜಿಲ್ಲೆಯಾದ್ಯಾಂತ 1. 3, 5, 7ನೇ ದಿನಗಳೆಂದು ಮೂರ್ತಿಗಳನ್ನು ಮೆರವಣಿಗೆಯಲ್ಲಿ ಸಾಗಿಸಿ ವಿಸರ್ಜನೆ ಕೈಗೊಳ್ಳುವರು. ಈ ಮೆರವಣಿಗೆಗಳಲ್ಲಿ ಆಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಡಿ.ಎಸ್.ಪಿ.ಕೊಪ್ಪಳ ಮತ್ತು ಗಂಗಾವತಿ ರವರಿಗೆ ದಿನಾಂಕ 07/09/2024, 09/09/2024, 11/09/2024 ಮತ್ತು 13/09/2024 ರ ದಿನಗಳಂದು ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲು ಪ್ರಸ್ತಾವನೆಗಳನ್ನು ಸಲ್ಲಿಕೆ ಮಾಡಲಾಗಿದೆ.
ಕೊಪ್ಪಳ ಜಿಲ್ಲೆಯಾದ್ಯಂತ ಗೌರಿ ಗಣೇಶ ಹಬ್ಬದ ಆಚರಣೆ ಸಮಯದಲ್ಲಿ ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಸಮಯದಲ್ಲಿ ಯಾವುದೇ ರೀತಿಯ ಆಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಸದರಿ ದಿನಗಳಂದು ಜಿಲ್ಲೆಯಾದ್ಯಾಂತ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ
ಗೌರಿ-ಗಣೇಶ ಹಬ್ಬದ ಆಚರಣೆ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿ ಯಿಂದ ಜಿಲ್ಲೆಯಾದ್ಯಂತ ಮದ್ಯಪಾನ ಹಾಗೂ ಮದ್ಯ ಮಾರಾಟ ನಿಷೇದಾಜ್ಞೆಯನ್ನು ಜಾರಿಗೊ ಳಿಸುವುದು ಸೂಕ್ತವೆಂದು ಕಂಡುಬಂದ ಹಿನ್ನಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.
ದಿನಾಂಕ:05/09/2024 ಜಿಲ್ಲೆಯಾದ್ಯಂತ ಪ್ರತಿ ವರ್ಷದಂತೆ ಗೌರಿ-ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದು,ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆ, ಶಾಂತಿ ಪಾಲ ನೆಗಾಗಿ ಮತ್ತು ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ನಲಿನ್ ಅತುಲ್ ಭಾ.ಆ.ಸೇ ರವರು
ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ 21ರ ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲೆಯಾದ್ಯಂತ ದಿನಾಂಕ 07/09/2024, 09/09/2024, 11/09/2024 ಮತ್ತು 13/09/2024ರ ಗಣೇಶ ಮೂರ್ತಿ ವಿಸರ್ಜನಾ ದಿನಗಳಂದು ಬೆಳಿಗ್ಗೆ 6ಗಂಟೆಯಿಂದ ರಾತ್ರಿ 11ಗಂಟೆವರೆಗೂ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.