ಹೊಸಪೇಟೆ ವಿಜಯನಗರ ಜಿಲ್ಲೆ ಸೆಪ್ಟೆಂಬರ್ 23: ಬಯಲುಸೀಮೆಯ ಜನರ ಜೀವನದಿ ತುಂಗಭದ್ರಾ ಜಲಾಶಯದ ಪ್ರದೇಶಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 22ರಂದು ಭೇಟಿ ನೀಡಿ ಡ್ಯಾಮ್ ಭರ್ತಿಯಾದ ಹಿನ್ನೆಲೆಯಲ್ಲಿ ಬಾಗಿನ ಸಮರ್ಪಣೆ ಮಾಡಿದರು.

ಮಲಪನಗುಡಿಯ ಉಲ್ತೆಪ್ಪ ಡೊಳ್ಳು ಕುಣಿತ ತಂಡ, ಹೂವಿನಹಡಗಲಿಯ ಸಮ್ಮಾಳ, ನಂಧಿ ಧ್ವಜ, ಹೊಸಪೇಟೆಯ ವೆಂಕಟೇಶ್ವರ ಕಂಚಿಮೇಳ ತಂಡದವರು ಮತ್ತು ಬಳ್ಳಾರಿ ಜಿಲ್ಲೆಯ ರಾಮಸಾಗರದ ವೀರವಣಿತೆ ಓಬವ್ವ ಕಹಳೆ ವಾದನ ಪ್ರದರ್ಶನಗಳು ಕಾರ್ಯಕ್ರಮದ ಮೆರಗು ಹೆಚ್ಚಿಸಿದವು. ತುಂಗಭದ್ರಾ ಜಲಾಶಯದ ಆಣೆಕಟ್ಟಿನ ಮೇಲೆ ಹಬ್ಬದ ಸಂಭ್ರಮ ಕಂಡು ಬಂದಿತು. ತಳಿರು ತೋರಣ, ಹೂವುಗಳಿಂದ ಆಣೆಕಟ್ಟನ್ನು ಶೃಂಗರಿಸಲಾಗಿತ್ತು. ಪುರೋಹಿತರಾದ ಹೊಸಪೇಟೆಯ ಕೀರ್ತಿನಾಥ ಭಟ್, ತಿರುಮಲ ಭಟ್, ರಮೇಶ ಆಚಾರ್ಯ, ವಿದ್ಯಾಶಂಕರ, ಗೋವರ್ಧನ, ಆನಂದ ಜೋಶಿ ಅವರು ಬಾಗಿನ ಅರ್ಪಣೆಯ ಗಣಪತಿ ಪೂಜೆ, ಗಂಗಾಪೂಜೆ, ತುಂಗಭದ್ರಾ ನದಿಪೂಜೆ ನೆರವೇರಿಸಿದರು.

ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳ ಬಳಿಕ ಉಪ ಮುಖ್ಯಮಂತ್ರಿಗಳು, ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಇನ್ನೀತರ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಮ್ಮುಖದಲ್ಲಿ ಮುಖ್ಯಮಂತ್ರಿಗಳು ತುಂಗಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಭಾರಿ ಮತ್ತು ಮಧ್ಯಮ ನೀರಾವರಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ವಸತಿ, ವಕ್ಸ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ವಿಜಯನಗರ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ಮಾನ್ಯ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ, ಕರ್ನಾಟಕ ರಾಜ್ಯ ಕೈಗಾರಿಕ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಿಂಧನೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಕಂಪ್ಲಿ ವಿಧಾನಸಭಾ ಕ್ಷೇತ್ರ ಶಾಸಕರಾದ ಜೆ.ಎನ್.ಗಣೇಶ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷರು ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರ ಶಾಸಕರಾದ ಆರ್.ಬಸನಗೌಡ ತುರುವಿಹಾಳ, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರ ಶಾಸಕರಾದ ಬಸನಗೌಡ ದದ್ದಲ್, ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಬಳ್ಳಾರಿ ಸಂಸದರಾದ ಈ.ತುಕಾರಾಂ, ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ, ರಾಯಚೂರು ಸಂಸದರಾದ ಜಿ.ಕುಮಾರ್ ನಾಯಕ, ಕೂಡ್ಲಿಗಿ ಶಾಸಕರಾದ ಡಾ ಶ್ರೀನಿವಾಸ್ ಎನ್.ಟಿ., ಹೂವಿನಹಡಗಲಿ ಶಾಸಕರಾದ ಎಲ್.ಕೃಷ್ಣ ನಾಯಕ, ಹರಪ್ಪನಹಳ್ಳಿ ಶಾಸಕರಾದ ಎಂ.ಪಿ ಲತಾ ಮಲ್ಲಿಕಾರ್ಜುನ್, ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರುಗಳಾದ ಬಸನಗೌಡ ಬಾದರ್ಲಿ, ತುಂಗಭದ್ರ ಯೋಜನೆ ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹಸನ್‌ಸಾಬ್ ನಬೀಬ್ ಸಾಬ್ ದೋಟಿಹಾಳ, ಹೊಸಪೇಟೆಯ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಎಚ್.ಎನ್.ಎಫ್ ಮಹಮದ್ ಇಮಾಮ್ ನಿಯಾಜಿ, ಹೊಸಪೇಟೆ ನಗರಸಭೆ ಅಧ್ಯಕ್ಷರಾದ ರೂಪೇಶ್ ಕುಮಾರ್ ಎನ್., ಕೃಷ್ಣಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ.ಮೊಹನ್ ರಾಜ್, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಕೃಷ್ಣ ಭಾಜಪೇಯಿ, ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ, ನಲಿನ್ ಅತುಲ್, ವಿಜಯನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ನೋಂಗ್ಜಾಯ ಮೋಹಮ್ಮದ್ ಅಲಿ ಅಕ್ರಮ್ ಷಾ, ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಬಳ್ಳಾರಿ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಬಿ.ಎಸ್. ಲೋಕೇಶ್ ಕುಮಾರ್, ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿ ಬಾಬು ಬಿ.ಎಲ್., ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿಗಳಾದ ಇ ಬಾಲಕೃಷ್ಣಪ್ಪ, ಸಿದ್ರಾಮೇಶ್ವರ, ವಿಜಯನಗರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಲೀಂ ಪಾಶಾ, ಕೊಪ್ಪಳ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಹೇಮಂತಕುಮಾರ, ಸಹಾಯಕ ಆಯುಕ್ತರಾದ ವಿವೇಕಾನಂದ ಪಿ., ಡಿವೈಎಸ್ಪಿ ಮಂಜುನಾಥ, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ ಬಿ.ಕುಲಕರ್ಣಿ, ಕರ್ನಾಟಕ ನೀರಾವರಿ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರಾದ ರಾಜೇಶ ಅಮ್ಮನಬಾವಿ, ತುಂಗಭದ್ರಾ ಬೋರ್ಡ್ ಕಾರ್ಯದರ್ಶಿಗಳಾದ ಒ.ಆರ್.ಕೆ. ರೆಡ್ಡಿ, ಕ.ನೀ.ನಿ.ನಿ, ನೀ.ಕೇ.ವ. ಮುನಿರಾಬಾದ್ ಮುಖ್ಯ ಅಭಿಯಂತರರಾದ ಹನುಮಂತ ಜಿ ದಾಸರ, ಮುನಿರಾಬಾದ್ ತುಂಗಭದ್ರ ಯೋಜನ ವೃತ್ತದ ಅಧೀಕ್ಷಕ ಅಭಿಯಂತರರಾದ ಎಲ್.ಬಸವರಾಜ್, ತುಂಗಭದ್ರಾ ಬೋರ್ಡ್ ಅಧೀಕ್ಷಕ ಅಭಿಯಂತರರಾದ ಶ್ರೀಕಾಂತ್ ರೆಡ್ಡಿ, ರಾಯಚೂರು ಜಿಲ್ಲೆಯ ಯರಮರಸ್ ಕ್ಯಾಂಪ್ ತುಂಗಭದ್ರ ಕಾಲುವೆ ನಿರ್ಮಾಣ ವೃತ್ತದ ಅಧೀಕ್ಷಕ ಅಭಿಯಂತರರಾದ ಕೆ.ಬಿ.ಹೆಚ್ ಶಿವಶಂಕರ್, ಮುನಿರಾಬಾದ್ ಕ.ನೀ.ನಿ.ನಿ ನಂ.1 ತುಂಗಭದ್ರಾ ಜಲಾಶಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಗಿರೀಶ್ ಸಿ ಮೇಟಿ, ತುಂಗಭದ್ರಾ ಬೋರ್ಡ್ ಕಾರ್ಯಪಾಲಕ ಅಭಿಯಂತರರಾದ ಜಿ.ಟಿ. ರವಿಚಂದ್ರ, ಮುನಿರಾಬಾದ್ ಕ.ನೀ.ನಿ.ನಿ ಮುಖ್ಯ ಕಾಮಗಾರಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಧರ್ಮರಾಜ ಎಲ್ ಹಾಗೂ ಇನ್ನೀತರರು ಇದ್ದರು.

error: Content is protected !!