ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಜವನಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಸಿ.ಈಶ್ವರ್ ಅವರನ್ನು ಕರ್ತವ್ಯ ಲೋಪ ಕಾರಣಕ್ಕೆ ಸೇವೆಯಿಂದ ಅಮಾನತುಗೊಳಿಸಿ ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.
ಹಣಕಾಸಿನ ವ್ಯವಹಾರದ ಲೆಕ್ಕ ಒದಗಿಸದೆ ಕರ್ತವ್ಯ ಲೋಪ ತೋರಿದ್ದಾರೆ. ಸರ್ಕಾರಿ ನೌಕರರಾಗಿ ಕರ್ನಾಟಕ ನಾಗರೀಕ ಸೇವಾ (ನಡವಳಿ) ನಿಯಮಾವಳಿಗಳು-1966 ನಿಯಮ-3(I)(II)&(III) ಉಲ್ಲಂಘಿಸಿದ ಕಾರಣ ಪಿಡಿಓ ಸಿ.ಈಶ್ವರ್ ಅವರನ್ನು ಅಮಾನತು ಮಾಡಿರುವುದಾಗಿ ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ 15ನೇ ಹಣಕಾಸಿನ ಖರ್ಚು ವೆಚ್ಚದ ಮಾಹಿತಿಯನ್ನು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ನೀಡದೆ ಉದ್ಧಟ ತನವನ್ನು ತೋರುವುದರ ಜೊತೆಗೆ,ಜಿಲ್ಲಾ ಪಂಚಾ ಯಿತಿ ಮುಖ್ಯ ಲೆಕ್ಕಾಧಿಕಾರಿಗಳ ನೇತೃತ್ವದಲ್ಲಿ ನೇಮಿಸಲಾದ ತನಿಖಾ ತಂಡ ಆಡಿಟ್ ನಡೆಸಲು ಸೂಕ್ತ ದಾಖಲೆಗಳನ್ನು ನೀಡದೆ ಬೇಜವಬ್ದಾರಿ ಯನ್ನು ಪ್ರದರ್ಶಿಸಿದ ಪಿಡಿಓ ಸಿ.ಈಶ್ವರ್