ಶಿವಮೊಗ್ಗ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಹಾಗೂ ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಜ.15 ರ ಬೆಳಿಗ್ಗೆ 11 ಕ್ಕೆ ಕುವೆಂಪು ರಂಗಮಂದಿರದಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಏರ್ಪಡಿಸಲಾಗಿದೆ.

      ಕಾರ್ಯಕ್ರಮದ ಉದ್ಘಾಟನೆಯನ್ನು ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸಿ.ನಾರಾಯಣಗೌಡ ಇವರು ನೆರವೇರಿಸುವರು. ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಇಂಧನ ಸಚಿವರಾದ ವಿ.ಸುನಿಲ್ ಕುಮಾರ್, ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಇವರ ಘನ ಉಪಸ್ಥಿತಿ ಇರಲಿದೆ.

    ಶಾಸಕರಾದ ಕೆ.ಎಸ್.ಈಶ್ವರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು, ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ ಸಿಇಓ  ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಡಾ.ಶುಭಾ ಮರವಂತೆ ಇವರು ವಿಶೇಷ ಉಪನ್ಯಾಸ ನೀಡುವರು.

error: Content is protected !!