
ಕೊಪ್ಪಳ: ರಾಷ್ಟ್ರೀಯ ಯುವ ಸಂಪ್ತಾಹ ನಿಮಿತ್ತ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 15 ರಂದು ಹಮ್ಮಿಕೊಂಡಿದ್ದ ಯೋಗಥಾನ್ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಆಯುಷ್ ಟಿವಿ ಪ್ರೈ.ಲಿ ಬೆಂಗಳೂರು, ಪತಂಜಲಿ ಯೋಗ ಸಂಸ್ಥೆ ಕೊಪ್ಪಳ ಹಾಗೂ ಜಿಲ್ಲಾ ಸರ್ವ ಯೋಗ ಸಂಸ್ಥೆಗಳ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಪ್ರಯುಕ್ತ ರಾಷ್ಟೀಯ ಯುವ ಸಪ್ತಾಹದ ಅಂಗವಾಗಿ “ಯೋಗಥಾನ್-2023’’ ಕಾರ್ಯಕ್ರಮವನ್ನು ಭಾನುವಾರದಂದು ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ.ಫೌಜಿಯಾ ತರನ್ನುಮ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಾಂತೇಶ ಎಸ್ ಪಾಟೀಲ್, ಜಿ.ಪಂ ಯೋಜನಾ ನಿರ್ದೇಶಕರಾದ ಟಿ.ಕೃಷ್ಣಮೂರ್ತಿ, ಜಿಲ್ಲಾ ಆಯುಷ್ ಅಧಿಕಾರಿ ವೈ.ಜೆ ಶಿರವಾರ ಸೇರಿದಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ, ಯೋಗಾಸನ ಮಾಡುವುದರ ಮೂಲಕ ಯೋಗಥಾನ್ ಯಶಸ್ವಿಗೊಳಿಸಿದರು. ರಾಜ್ಯಾದ್ಯಂತ ನಡೆದ ಯೋಗಥಾನ್ ಕಾರ್ಯಕ್ರಮಕ್ಕೆ ಕೊಪ್ಪಳ ಜಿಲ್ಲೆಯಿಂದ ಸುಮಾರು 9781 ಜನರು ನೋಂದಾಯಿಸಿಕೊಂಡಿದ್ದರು.