ಕೊಪ್ಪಳ: ಜನವರಿ 17: ಕೊಪ್ಪಳ ಜಿಲ್ಲಾಡಳಿತದಿಂದ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕಾರ್ಯಕ್ರಮವನ್ನು ಜನವರಿ 21 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.


ರಾಜ್ಯ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಹಾಲಪ್ಪ ಬಸಪ್ಪ ಆಚಾರ ಘನ ಉಪಸ್ಥಿತರಿರುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು.


ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಎಲ್.ಪಾಟೀಲ್ ಬಯ್ಯಾಪೂರ, ಪರಣ್ಣ ಈಶ್ವರಪ್ಪ ಮುನವಳ್ಳಿ ಹಾಗೂ ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಾಂತೇಶ ಎಸ್ ಪಾಟೀಲ್ ಪಾಲ್ಗೊಳ್ಳುವರು.


ವಿಶೇಷ ಆಹ್ವಾನಿತರಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಟಿ.ಕೆ ಅನಿಲಕುಮಾರ್ ಭಾಗವಹಿಸುವರು. ಕಾರ್ಯಕ್ರಮದ ಅಂಗವಾಗಿ ಗದಗ ಸನ್ಮಾರ್ಗ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕರಾದ ಹೇಮಂತ ದಳವಾಯಿ ಅವರು ಶ್ರೀ ಅಂಬಿಗರ ಚೌಡಯ್ಯನವರ ಕುರಿತು ವಿಶೇಷ ಉಪನ್ಯಾಸ ನೀಡುವರು.

ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!