
ಗಂಗಾವತಿ.20 ಗಂಗಾವತಿ ನಗರದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅನುದಾನದ ಅಡಿಯಲ್ಲಿ ನಿರ್ಮಿಸಿದ ಹೆಚ್ಚುವರಿ 30 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಉದ್ಘಾಟಿಸಿದರು ನಂತರ ಉದ್ಘಾಟಿಸಿ ಮಾತನಾಡಿ ಶಾಸಕರಾದ ಪರಣ್ಣ ಮುನವಳ್ಳಿ ಅವರು ಈಡಿ ರಾಜ್ಯದಲ್ಲಿ ಮೂರು ಬಾರಿ ಪ್ರಶಸ್ತಿ ಪಡೆದ ಏಕೈಕ ಆಸ್ಪತ್ರೆ ಗಂಗಾವತಿ ಸರ್ಕಾರಿ ಆಸ್ಪತ್ರೆ ಕರೋನ ಸಂದರ್ಭದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತಮ್ಮಜೀವತೋರಿದ ಒಳ್ಳೆಯ ಕೆಲಸವನ್ನು ಈ ಆಸ್ಪತ್ರೆ ಸಿಬ್ಬಂದಿ ವರ್ಗದವರು ಅದರ ಜೊತೆಗೆ ನಮ್ಮ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಸಾಕಷ್ಟು ಅಭಿವೃದ್ಧಿ ಮಾಡಿದೆ ಮತ್ತು ಸ್ವಚ್ಛತೆಗೆ ಮೊದಲ ಆದ್ಯತೆ ನಮ್ಮ ಸರ್ಕಾರ ನೀಡುತ್ತದೆ.

ಆದಕಾರಣ ಬಿಪಿಎಲ್ ಕಾರ್ಡ್ ಹೊಂದಿದವರಿಗೆ 5 ಲಕ್ಷ ರೂಪಾಯಿ ವರಿಗೆ ಉಚಿತವಾಗಿ ನೀಡುತ್ತಾರೆ ಆದಕಾರಣ ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಾರ್ವಜನಿಕರಿಗೆ ಸಲಹೆ ನೀಡಿದರು ನಂತರ ನಮ್ಮ ಗಂಗಾವತಿ ಹನಮ ಹುಟ್ಟಿದ ನಾಡು ನಮ್ಮ ಗಂಗಾವತಿ ಎಂದು ಹೆಮ್ಮೆಯಿಂದ ಹೇಳುತ್ತೇವೆ ಮತ್ತು ಈ ಒಂದು ಆಸ್ಪತ್ರೆಯಲ್ಲಿ ಒಳ್ಳೆಯ ಸೇವೆಯನ್ನು ಡಾ.ಈಶ್ವರ ಸವಡಿ ಹಾಗೂ ಅವರು ಸಿಬ್ಬಂದಿಗಳು ಒಳ್ಳೆಯ ಕೆಲಸವನ್ನು ಮಾಡುತ್ತಿದ್ದಾರೆ ಎಂದು ನಾನು ಹೆಮ್ಮೆಯಿಂದ ಹೇಳುತ್ತಿದ್ದೇನೆ.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಲಕನಂದ ಡಿ.ಮಳಗಿ.ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶರಣಪ್ಪ ಚಕೋತಿ. ಮುಖ್ಯ ವೈದ್ಯಾಧಿಕಾರಿಗಳಾದ ಡಾ.ಈಶ್ವರ ಸವಡಿ,ಮಾಜಿ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ನಗರಸಭೆ ಸದಸ್ಯರಾದ ನವೀನಕುಮಾರ ಪಾಟೀಲ್, ರಮೇಶ ಚೌಡ್ಕಿ, ವಾಸುದೇವ ನವಲಿ,ಆರೋಗ್ಯ ಸಮಿತಿಯ ಸದಸ್ಯರಾದ ಟಿ.ಆರ್.ರಾಯಭಾಗಿ, ನಗರ ಯೋಜನಾ ಪ್ರಾಧಿಕಾರ ಸದಸ್ಯರಾದ ಶಿವಪ್ಪ ಎಮ್,ಮಾಜಿ ಜಿ.ಪಂ.ಸದಸ್ಯರಾದ ಸಿದ್ದರಾಮಸ್ವಾಮಿ,ಮಾಜಿ ನಗರ ಯೋಜನಾ ಪ್ರಧಿಕಾರ ಅಧ್ಯಕ್ಷ ಮಲ್ಲೇಶಪ್ಪ ಹೊಸಮಲಿ,ಹಾಗೂ ಆರೋಗ್ಯ ಸಿಬ್ಬಂದಿಗಳು ಸೇರಿದಂತೆ ಇತರರು ಇದ್ದರು