ಬಳ್ಳಾರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಡೆಯುತ್ತಿರುವ ಬಳ್ಳಾರಿ ಉತ್ಸವದ ಸಮಾರೋಪ ಸಮಾರಂಭವು ಜ.22 ಸಂಜೆ 6ಕ್ಕೆ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಮುನಿಸಿಪಲ್ ಮೈದಾನದ ಬಳ್ಳಾರಿ ರಾಘವ ವೇದಿಕೆಯಲ್ಲಿ ನಡೆಯಲಿದೆ.
ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಸಮಾರೋಪ ಭಾಷಣ ಮಾಡುವರು.
ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಸಚಿವರಾದ ಆನಂದಸಿಂಗ್, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವರಾದ ವಿ.ಸುನೀಲ್‍ಕುಮಾರ್ ಅವರು ಘನಉಪಸ್ಥಿತಿ ಇರುವರು.
ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರರೆಡ್ಡಿ ಅಧ್ಯಕ್ಷತೆ ವಹಿಸುವರು.
ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಬಿ.ನಾಗೇಂದ್ರ, ಎಂ.ಎಸ್.ಸೋಮಲಿಂಗಪ್ಪ, ಜೆ.ಎನ್.ಗಣೇಶ್, ಎಂಎಲ್‍ಸಿಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗುತ್ತಿಗನೂರು ವಿರುಪಾಕ್ಷಗೌಡ, ಮಹಾನಗರ ಪಾಲಿಕೆ ಮಹಾ ಪೌರರಾದ ಎಂ.ರಾಜೇಶ್ವರಿ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಾರುತಿ ಪ್ರಸಾದ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕರಾದ ಪ್ರಕಾಶ್ ಜಿ.ನಿಟ್ಟಾಲಿ ಅವರು ವಿಶೇಷ ಅತಿಥಿಗಳಾಗಿ ಆಗಮಿಸಿಲಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್‍ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಲಿಂಗಮೂರ್ತಿ, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಸೇರಿದಂತೆ ಇತರರು ಉಪಸ್ಥಿತರಿರಲಿದ್ದಾರೆ.
ಜ.22ರಂದು ಮುನಿಸಿಪಲ್ ಮೈದಾನದ ರಾಘವ ವೇದಿಕೆಯಲ್ಲಿ ಸಂಜೆ 6.30ರಿಂದ ರಾತ್ರಿ 12.30ರವರೆಗೆ ಪ್ರಕಾಶ್ ಹೆಮ್ಮಾಡಿ ತಂಡದಿಂದ ವಿಭಿನ್ನ ಜಾದು ಪ್ರದರ್ಶನ, ಬುಡಕಟ್ಟು ಜನಾಂಗದ ಕಲಾವಿದರಿಂದ ನೃತ್ಯ ರೂಪಕ, ಪ್ರಹ್ಲಾದ್ ಆಚಾರ್‍ರವರ ಶಾಡೋ ಷೋ, ಕೊಳಲುವಾದನ ಸಂದೀಪ್, ಕಿಬೋರ್ಡ್ ವೀಣಾ, ತಬಲಾ ಪ್ರತ್ಯುಬ ಸೊರಬ, ಡ್ರಮ್ ಸೆಟ್ ಪ್ರಕಾಶ್ ಅಂತೋನಿ, ವಾಯಲಿನ್ ಮನಿ ಇವರಿಂದ ವಾದ್ಯ ಸಂಗೀತ ಜುಗಲ್ ಬಂದಿ ಮತ್ತು ಬಾಲಿವುಡ್ ಖ್ಯಾತ ಗಾಯಕಿ ಸುನಿಧಿ ಚವ್ಹಾಣ್ ತಂಡದಿಂದ ರಸಮಂಜರಿ ಕಾರ್ಯಕ್ರಮ ಸೇರಿದಂತೆ ಇತರೆ ಕಾರ್ಯಕ್ರಮಗಳು ನಡೆಯಲಿದೆ.
ಇದೇ ದಿನದಂದು ಎರಡನೇಯ ವೇದಿಕೆಯಾದ ಕೋಟೆ ಶ್ರೀ ಮಲ್ಲೇಶ್ವರ ದೇವಸ್ಥಾನದ ಆವರಣದ ಡಾ.ಜೋಳದ ರಾಶಿ ದೊಡ್ಡನಗೌಡರ ವೇದಿಕೆಯಲ್ಲಿಯೂ ಸಂಜೆ 4ರಿಂದ ರಾತ್ರಿ 12ರವರೆಗೆ ವಿವಿಧ ಕಲಾತಂಡಗಳಿಂದ ಸಂಗೀತ, ವಿವಿಧ ನೃತ್ಯ, ಬಯಲಾಟ ಸೇರಿದಂತೆ ಹಲವಾರು ಕಾರ್ಯಕ್ರಮ ನಡೆಯಲಿದೆ.
ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದ್ದು, ಎಲ್ಲಾ ಕಾರ್ಯಕ್ರಮಗಳನ್ನು ವೀಕ್ಷಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಉತ್ಸವ ಆಚರಣೆಯ ಕಾರ್ಯಕಾರಿ ಸಮಿತಿ ಅಧ್ಯಕ್ಷರಾದ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.
—–