ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದಿದ್ದಾಗ ಬಿಜೆಪಿ ಜೊತೆ ಕೈಜೋಡಿಸಿ ಮುಖ್ಯಮಂತ್ರಿಯಾಗುವಂತೆ ಪ್ರಧಾನಿ ನರೇಂದ್ರ ಮೋದಿಯವರೇ ಕುಮಾರಸ್ವಾಮಿಯವರಿಗೆ ಹೇಳಿದ್ದರು ಎಂದು ತಿಳಿಸಿದ್ದಾರೆ.

ಹಾಸನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ದೇವಸ್ಥಾನಕ್ಕೆ ಹೋಗಿ ಬಂದಿದ್ದೇನೆ. ಸುಳ್ಳು ಹೇಳುವುದಿಲ್ಲ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಸರ್ಕಾರ ಪತನಗೊಳಿಸಲು ಕಾಂಗ್ರೆಸ್ ನವರೇ ಶಾಸಕರನ್ನು ಬಿಜೆಪಿಗೆ ಕಳುಹಿಸಿದ್ದರು ಎಂದು ರೇವಣ್ಣ ಆರೋಪಿಸಿದ್ದಾರೆ.

ಅಂದು ನಾನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆಯಲ್ಲಿಯೇ ಇದ್ದೆ. ಆಗ ಅವರು ನೀನು ಡಿಸಿಎಂ ಆಗುವುದಾದರೆ ಐವರು ಶಾಸಕರು ಮರಳಿ ಬರುತ್ತಾರೆ ಎಂದು ತಿಳಿಸಿದ್ದರು. ಸಿದ್ದರಾಮಯ್ಯ ನನಗೆ ಆತ್ಮೀಯರಾಗಿದ್ದರೂ ಸಹ ರಾಜಕೀಯ ಬೇರೆ, ವೈಯುಕ್ತಿಕ ಸಂಬಂಧ ಬೇರೆ ಎಂದು ಹೇಳಿದ್ದಾರೆ.

error: Content is protected !!