
ಬೆಳಗಾವಿ : ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದರು.
ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಯಡಿಯೂರಪ್ಪ ಕೋಲಾರದಲ್ಲಿ ಸಿದ್ದರಾಮಯ್ಯ ನಿಂತರೆ ಸೋಲು ಎಂಬುದು ನಿಶ್ಚಿತ, ಕೋಲಾರದಲ್ಲಿ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ನಿಲ್ಲಲ್ಲ ಸಿದ್ದರಾಮಯ್ಯ ಮೈಸೂರಿನಿಂದ ಸ್ಪರ್ಧಿಸಲು ಸದ್ದಿಲ್ಲದೇ ಪ್ರಯತ್ನ ಪಡುತ್ತಿದ್ದಾರೆ.
ಕೋಲಾರದಲ್ಲಿ ನಿಂತು ನಾಟಕ ಮಾಡುತ್ತಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.
ನಮ್ಮ ಬಿಜೆಪಿ ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ, ಎರಡ್ಮೂರು ದಿನಗಳಲ್ಲಿ ಪ್ರವಾಸ ಮಾಡುತ್ತೇನೆ, ಆಗ ಜನರ ಬೆಂಬಲ ಎಷ್ಟಿದೆ ಎಂದು ಗೊತ್ತಾಗುತ್ತದೆ, ಚುನಾವಣೆಯಲ್ಲಿ ಬಿಜೆಪಿ 140 ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ, ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದರು.