
ನವದೆಹಲಿ, ಜನವರಿ 23: ಸಮಾಜದಲ್ಲಿ ಗಂಡು ಮಕ್ಕಳಿಗೆ ಹೋಲಿಸಿದರೆ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ.
ದೇಶದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು 2008 ರಲ್ಲಿ ಭಾರತ ಸರ್ಕಾರ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಪ್ರಾರಂಭಿಸಿತು. ಇದಕ್ಕೆ ಪೂರಕವಾಗಿ ಕಳೆದ ವರ್ಷ “ಬೇಟಿ ಬಚಾವೋ, ಬೇಟಿ ಪಢಾವೋ” (ಬಿಬಿಬಿಪಿ) ಯೋಜನೆಯ ವಾರ್ಷಿಕೋತ್ಸವವನ್ನು ಆಚರಿಸಲಾಗಿದೆ.
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಮುಖ್ಯ ಮಹತ್ವವೆಂದರೆ ಭಾರತದಲ್ಲಿ ಹೆಣ್ಣು ಮಗು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಿ, ಜನರಿಗೆ ಈ ಬಗ್ಗೆ ಅರಿವು ಮೂಡಿಸುವುದಾಗಿದೆ.
ಇನ್ನು, ಈ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ನೆಪದಲ್ಲಿ ನಮ್ಮ ಸಮಾಜದಲ್ಲಿ ಇನ್ನೂ ಇರುವ ಪ್ರಮುಖ ಸಮಸ್ಯೆಗಳನ್ನು ಈ ಕೆಳಗೆ ಪಟ್ಟಿ ಮಾಡಲಾಗಿದೆ.
*ಶಿಕ್ಷಣ*
ಭಾರತದಲ್ಲಿ ಬಾಲಕಿಯರ ಶಿಕ್ಷಣಕ್ಕೆ ಇನ್ನು ಹೆಚ್ಚಿನ ಆದ್ಯತೆ ಬೇಕು, ಪ್ರಸ್ತುತ ಪರಿಸ್ಥಿತಿಯ ಪ್ರಕಾರ ಮಹಿಳೆಯರ ಸಾಕ್ಷರತೆಯ ಪ್ರಮಾಣವು 64% ರಷ್ಟಿದೆ. ಆದರೆ, ಇದು ಪುರುಷ ಸಾಕ್ಷರತಾ ಪ್ರಮಾಣಕ್ಕೆ ಹೋಲಿಸಿದರೆ ಕಡಿಮೆಯಿದೆ. ಪುರುಷರ ಸಾಕ್ಷರತಾ ಪ್ರಮಾಣ 82% ರಷ್ಟಿದೆ. ಹೆಣ್ಣು ಮಗುವಿಗೆ ಶಿಕ್ಷಣ ನೀಡುವ ಮೂಲಕ, ನಾವು ಆಕೆಯನ್ನು ಸಶಕ್ತ ಮಹಿಳೆಯಾಗಿಸುವತ್ತ ದಿಟ್ಟ ಹೆಜ್ಜೆಯಿಡಬಹದು.
*ಹೆಣ್ಣು ಮಕ್ಕಳ ಪೋಷಣೆ*
ಇಂದಿನ ಪರಿಸ್ಥಿತಿಯಲ್ಲಿ ಹೆಣ್ಣು ಮಕ್ಕಳು ತೀವ್ರವಾಗಿ ಬಳಲುತ್ತಿರುವುದು ಅಪೌಷ್ಟಿಕತೆ, ರಕ್ತಹೀನತೆ ಮತ್ತು ವಿಟಮಿನ್ ಎ ಕೊರತೆಯಂತಹ ಸಮಸ್ಯೆಗಳಿಂದ. ಅದರಲ್ಲೂ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಬಾಲಕಿಯರಲ್ಲಿ ಇದು ತುಂಬಾ ತೀವ್ರವಾಗಿರುತ್ತದೆ. ಆರೋಗ್ಯಕರ ಆಹಾರ ಮತ್ತು ಆರೈಕೆಯ ಕೊರತೆಯಿಂದಾಗಿ ಈ ಅಪೌಷ್ಟಿಕತೆ ಉಂಟಾಗುತ್ತದೆ.
*ಬಾಲ್ಯ ವಿವಾಹ*
ಇನದನು ಬಾಲ್ಯವಿವಾಹ. ಅದೇಷ್ಟೇ ಕಠಿಣ ಕಾನೂನು ಜಾರಿಗೆ ಬಂದರೂ ಸಾಮಾಜಿಕ, ಆರ್ಥಿಕ ಹಿನ್ನೆಲೆ ಸೇರಿದ ಸಮುದಾಯಗಳ ಅಪ್ರಾಪ್ತ ಬಾಲಕಿಯರು ಬಾಲ್ಯವಿವಾಹಗಳಿಗೆ ಬಲಿಯಾಗುತ್ತಿದ್ದಾರೆ.
*ಕಾನೂನು ಹಕ್ಕುಗಳು ಮತ್ತು ಹೆಣ್ಣು ಮಕ್ಕಳ ರಕ್ಷಣೆ*
ಅತ್ಯಾಚಾರ, ಆಸಿಡ್ ದಾಳಿ, ಮರ್ಯಾದಾ ಹತ್ಯೆಗಳು ಮತ್ತು ಬಲವಂತದ ವೇಶ್ಯಾವಾಟಿಕೆಗೆ ಅಮಾಯಕ ಹೆಣ್ಣುಮಕ್ಕಳು ಒಳಗಾಗುವುದು ನಡೆಯುತ್ತಲೆ ಇದೆ. ಈ ಅಪರಾಧಗಳು ಕಳೆದ ಹತ್ತು ವರ್ಷಗಳಲ್ಲಿ ಸಾಕಷ್ಟು ಹೆಚ್ಚಿವೆ. ಯುವತಿಯರನ್ನು ಕಳ್ಳಸಾಗಣೆ ಮಾಡುವ ಅನೇಕ ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ಸಾಮಾಜಿಕ ಸುಧಾರಣೆಯ ಅಗತ್ಯವಿದೆ.
ಹೆಣ್ಣು ಭ್ರೂಣಹತ್ಯೆ ನಿಲ್ಲಿಸಿ, ಹೆಣ್ಣುಮಕ್ಕಳ ಶಿಕ್ಷಣದ ಹಕ್ಕು ಮುಂತಾದ ಸಮಸ್ಯೆಗಳ ಕುರಿತು ‘ಬೇಟಿ ಬಚಾವೋ, ಬೇಟಿ ಪಢಾವೋ’ ಅಭಿಯಾನವು ಜನಜಾಗೃತಿ ಮೂಡಿಸುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಹೆಣ್ಣುಮಕ್ಕಳಿಗೆ ಶೌಚಾಲಯ ನಿರ್ಮಾಣ ಮಾಡುವಂತಹ ಕಾರ್ಯಗಳಿಗೆ ಸರ್ಕಾರ ಉತ್ತೇಜನ ನೀಡುತ್ತಿದೆ. ಆದರೆ, ಇದು ಎಷ್ಟರ ಮಟ್ಟಿಗೆ ಸಾಕಾರವಾಗಿದೆ ಎಂಬುದನ್ನು ಮತ್ತೆ ಸರ್ಕಾರಗಳೇ ಪ್ರಶ್ನಿಸಿಕೊಳ್ಳಬೇಕಿದೆ.
ಇನ್ನು, ಭಾರತೀಯ ಕ್ರೀಡಾ ಇತಿಹಾಸದಲ್ಲಿ ಕ್ರೀಡಾ ಸಚಿವಾಲಯವು ಒಂಬತ್ತು ಮಹಿಳಾ ಕ್ರೀಡಾಪಟುಗಳನ್ನು ಪದ್ಮ ಪ್ರಶಸ್ತಿ 2020 ಕ್ಕೆ ನಾಮನಿರ್ದೇಶನ ಮಾಡಿರುವುದು ಇದೇ ಮೊದಲು. ಅಲ್ಲದೆ, ಈ ವರ್ಷ ಮೊದಲ ಬಾರಿಗೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸಿಆರ್‌ಪಿಎಫ್‌ನ ಎಲ್ಲಾ ಮಹಿಳಾ ಬೈಕರ್ ತುಕಡಿಗಳು ಡೇರ್‌ಡೆವಿಲ್ ಸಾಹಸಗಳನ್ನು ಪ್ರದರ್ಶಿಸಲಿದ್ದಾರೆ.
ಈ ವರ್ಷ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು “ಬೇಟಿ ಬಚಾವೋ ಬೇಟಿ ಪಢಾವೋ” ಅಭಿಯಾನದ 5 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. #BetiBachaoBetiPadhao, #BBBP, #MeriBetiMeraGarv, #05YearsOfBBBP ನಂತಹ ಹ್ಯಾಶ್‌ಟ್ಯಾಗ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ಆಗಲಿವೆ.
*ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ 2023: ಥೀಮ್*
ಭಾರತ ಸರ್ಕಾರವು 2023 ರ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಥೀಮ್ ಅನ್ನು ಅಧಿಕೃತವಾಗಿ ಘೋಷಿಸಿಲ್ಲ. ಅಸ್ಸಾಂನ ನೆಡಾನ್ ಪ್ರತಿಷ್ಠಾನದ ಪ್ರಕಾರ 2021 ರ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಥೀಮ್ “ಬಾಲಕಿಯರ ಶಿಕ್ಷಣವನ್ನು ಉತ್ತೇಜಿಸುವುದು” ಆಗಿತ್ತು.