ಕೊಪ್ಪಳ: ಜಿಲ್ಲಾಡಳಿತದಿಂದ 74ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಜನವರಿ 26 ರಂದು ಬೆಳಿಗ್ಗೆ 9 ಗಂಟೆಗೆ  ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.


ರಾಜ್ಯ ಪ್ರವಾಸೋದ್ಯಮ, ಪರಿಸರ ಮತ್ತು ಜೀವಶಾಸ್ತ್ರ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು. ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ  ಸಚಿವರಾದ ಹಾಲಪ್ಪ ಬಸಪ್ಪ ಆಚಾರ ಅವರು ಘನಉಪಸ್ಥಿತರಿರುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಎಲ್.ಪಾಟೀಲ್ ಬಯ್ಯಾಪೂರ, ಪರಣ್ಣ ಈಶ್ವರಪ್ಪ ಮುನವಳ್ಳಿ ಹಾಗೂ ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಾಂತೇಶ ಎಸ್ ಪಾಟೀಲ್ ಪಾಲ್ಗೊಳ್ಳುವರು.

ವಿಶೇಷ ಆಹ್ವಾನಿತರಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಟಿ.ಕೆ ಅನಿಲಕುಮಾರ್ ಭಾಗವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ ಅವರು ಉಪಸ್ಥಿತರಿರುವರು.

74ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಬೆಳಿಗ್ಗೆ 9 ಗಂಟೆಗೆ ಸಚಿವರಿಂದ ರಾಷ್ಟ್ರ ದ್ವಜರೋಹಣದ ನಂತರ ಪೊಲೀಸ್, ಎನ್.ಸಿ.ಸಿ., ಸೇವಾದಳ, ಭಾರತ್ ಸ್ಕೌಟ್ಸ್ ಮತು ಗೈಡ್ಸ್ ಹಾಗೂ ಗೃಹ ರಕ್ಷಕ ದಳದಿಂದ  ಪಥ ಸಂಚಲನ ಗೌರವ ರಕ್ಷೆ ಸ್ವೀಕಾರ, ಸನ್ಮಾನ ಮತ್ತು ಇನ್ನಿತರೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಪ್ರಕಟಣೆ ತಿಳಿಸಿದೆ.

error: Content is protected !!