2023ನೇ ಸಾಲಿನ ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನಿ ನರೇಂದ್ರ ಮೋದಿ , ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ನವದೆಹಲಿ: 2023ನೇ ಸಾಲಿನ ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನಿ ನರೇಂದ್ರ ಮೋದಿ , ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಶಸ್ತಿ ಪುರಸ್ಕೃತರು ದೇಶಕ್ಕೆ ನೀಡಿರುವ ಶ್ರೀಮಂತ ಮತ್ತು ವೈವಿಧ್ಯಮಯ ಕೊಡುಗೆಗಳು ಮತ್ತು ನಮ್ಮ ಬೆಳವಣಿಗೆಯ ಹಾದಿ ಹೆಚ್ಚಿಸಲು ಅವರ ಪ್ರಯತ್ನಗಳನ್ನು ದೇಶ ಗೌರವಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ.

ಇನ್ನೂ ಪದ್ಮ ಪ್ರಶಸ್ತಿ ಮೂಲಕ ನಾಡಿಗೆ ಕೀರ್ತಿ ತಂದಿರುವ 8 ಸಾಧಕರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಕಿರು ಪರಿಚಯ ಮಾಡಿಕೊಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

error: Content is protected !!