ಬೆಂಗಳೂರು : ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಫೆಬ್ರವರಿ 3 ರಿಂದ ಎರಡನೇ ಹಂತದ ‘ಪ್ರಜಾ ಧ್ವನಿ’ ಬಸ್ ಯಾತ್ರೆ ಕೈಗೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುರುಡುಮಲೆಯಲ್ಲಿ ಬಸ್ ಯಾತ್ರೆ ಆರಂಭಿಸಲಿದ್ದು, ಬಸವಕಲ್ಯಾಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಸ್ ಯಾತ್ರೆ ಶುರು ಮಾಡಲಿದ್ದಾರೆ.

ಡಿ.ಕೆ. ಶಿವಕುಮಾರ್ ದಕ್ಷಿಣ ಕರ್ನಾಟಕ ಭಾಗದಲ್ಲಿ, ಸಿದ್ದರಾಮಯ್ಯ ಉತ್ತರ ಕರ್ನಾಟಕ ಭಾಗದಲ್ಲಿ ಪ್ರತ್ಯೇಕ ಬಸ್ ಯಾತ್ರೆ ಕೈಗೊಂಡಿದ್ದಾರೆ.

ಜನವರಿ 11 ರಿಂದ ಕಾಂಗ್ರೆಸ್ ನಾಯಕರು ಒಟ್ಟಿಗೆ ಪ್ರಜಾಧ್ವನಿ ಬಸ್ ಯಾತ್ರೆ ಕೈಗೊಂಡಿದ್ದರು. ಫೆಬ್ರವರಿ 3 ರಿಂದ ಪ್ರತ್ಯೇಕ ಯಾತ್ರೆ ಕೈಗೊಂಡಿದ್ದಾರೆ.

error: Content is protected !!